ಯುವಕ ಯುವತಿಯರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ: ಸಿ.ಎಂ.ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ ಯುವನಿಧಿ  ಶಿವಮೊಗ್ಗದಲ್ಲಿ  ಉದ್ಘಾಟನೆ

ಶಿವಮೊಗ್ಗ : ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು ಇವರ ಜನ್ಮ ದಿನದಂದೇ  ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. 

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ "ಯುವನಿಧಿ" ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.
ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ.
ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು. ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ "ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ" ಆಗಲಿ. ಇದಕ್ಕಾಗಿ ಜನ ಚಳವಳಿ ನಡೆಯಲಿ. ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌. ಪ್ರತಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಿ ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಬಿ.ವೈ.ರಾಘವೇಂದ್ರ,  ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Post a Comment

Previous Post Next Post

FLASH

Contact for News and Ads on Nirbhaya News Kannada : 9060723440