ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪರಿಶಿಷ್ಠ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ಸಭೆ ಹಾಗೂ ಕೊಪ್ಪಳ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಜರುಗಿತು
ರಾಜ್ಯಾಧ್ಯಕ್ಷ ಮಹೇಶ ಶೀಗಿಹಳ್ಳಿ ಮಾತನಾಡಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ನಿರಂತರ ಅನ್ಯಾಯ ವಾಗುತಿದ್ದು, ದೌರ್ಜನ್ಯ ತಡೆಗಟ್ಟಲು ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲೂಕ ಮಟ್ಟದಲ್ಲಿ ನಮ್ಮ ಸಂಘಟನೆಯನ್ನ ಹುಟ್ಟು ಹಾಕುತ್ತಿದ್ದೇವೆ. ಶೋಷಣೆಗೊಳಗಾಗುತ್ತಿರುವ ಪರಿಶಿಷ್ಟ ಪಂಗಡ ಸಮುದಾಯವನ್ನ ರಕ್ಷಿಸಲು ನಮ್ಮ ಸಂಘಟನೆ ನಿರಂತರ ಹೋರಾಟ ಮಾಡುತ್ತಿದೆ ಎಂದು ಅವರು ಹೇಳಿದರು.
ಕೊಪ್ಪಳ ಜಿಲ್ಲಾಧ್ಯಕ್ಷ ಶಂಕರಗೌಡ ಮಾಲಿ ಪಾಟೀಲ ಮಾತನಾಡಿ ಕೊಪ್ಪಳ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸಂಚಾರ ಮಾಡಿ ಸಮಾಜ ಸಂಘಟನೆ ಮಾಡುತ್ತಿದ್ದು, ಈಗಾಗಲೇ ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನ ಅಧ್ಯಕ್ಷರುಗಳನ್ನ ಆಯ್ಕೆ ಮಾಡಲಾಗಿದೆ. ಮುಂದಿನ ದಿನಮಾನಗಳಲ್ಲಿ ಸಮಾಜದ ಸಲುವಾಗಿ ಹೋರಾಟಗಳನ್ನು ಮಾಡುತ್ತೇವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌನೇಶ ಹೆಚ್ ಮದ್ಲೂರು, ಖಜಾಂಚಿ ಪಿಡ್ಡನಗೌಡ ಮಾಲಿ ಪಾಟೀಲ್ ,ಜಿಲ್ಲಾ ಉಪಾಧ್ಯಕ್ಷ ಸಿದ್ದಪ್ಪ ನಾಯಕ ,ಯಲಬುರ್ಗಾ ತಾಲೂಕ ಅಧ್ಯಕ್ಷ ನಾಗರಾಜ ಪೂಜಾರ,ಕುಷ್ಠಗಿ ತಾಲೂಕ ಅಧ್ಯಕ್ಷ ಶರಣಗೌಡ ಮಾಲಿ ಪಾಟೀಲ್,ಕನಕಗಿರಿ ತಾಲೂಕ ಅಧ್ಯಕ್ಷ ಹನಮಂತಪ್ಪ ನಾಯಕ ,ಗಂಗಾವತಿ ತಾಲೂಕ ಅಧ್ಯಕ್ಷ ವೆಂಕಟೇಶ ನಾಯಕ,ಕಾರಟಗಿ ತಾಲೂಕ ಅಧ್ಯಕ್ಷ ಬಸವರಾಜ ನಾಯಕ ,ಉಪಾಧ್ಯಕ್ಷರುಗಳಾದ ತಿಮ್ಮಗೌಡ್ರ,ಕನಕರಾಯ ಹೊಸೂರು, ಯಮನೂರಪ್ಪ ತಳವಾರ,ಹನಮಗೌಡ ಮಾಲಿ ಪಾಟೀಲ್,ಶರಣು ಮಲ್ಲೀಗೆವಾಡ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ನಿರ್ಭಯ ನ್ಯೂಸ್ ಕನ್ನಡ
" ಇದು ಪ್ರಜಾ ಧ್ವನಿ"
Post a Comment