ಸಾಮಾಜಿಕ ಕ್ರಾಂತಿಯ ಹರಿಕಾರ ವಿಶ್ವಗುರು ಬಸವಣ್ಣ : ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ
ಯಲಬುರ್ಗಾ: ಸರ್ಕಾರ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ಕಂದಾಯ ಭವನ ಸಭಾಂಗಣದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಜರುಗಿತು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿ ಬಸವಣ್ಣನವರು ತಮ್ಮ ಕಾಯಕನಿಷ್ಠೆಯ ಮೂಲಕ 12ನೇ ಶತಮಾನದಲ್ಲಿ ವಚನ ಸಾಹಿತ್ಯದೊಂದಿಗೆ ಸಮಾಜ ಸುಧಾರಣೆಯನ್ನು ಮಾಡಿದರು. ವಿಶ್ವಗುರು ಬಸವಣ್ಣನವರ ಕಾಯಕನಿಷ್ಠೆಯನ್ನು ನಾವು ನಮ್ಮ ಜೀವನದಲ್ಲಿ ಪರಿಪಾಲನೆ ಮಾಡುವ ಮೂಲಕ ಸದೃಢ ಸಮಾಜ ನಿರ್ಮಿಸೋಣ,ಸಮಾಜದಲ್ಲಿ ಬದಲಾವಣೆಯನ್ನು ತಂದ ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರನ್ನು ರಾಜ್ಯ ಸರಕಾರ 'ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ' ಎಂದು ಘೋಷಿಸಿ, ರಾಜ್ಯದ ಎಲ್ಲಾ ಸರಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಆದೇಶ ಹೊರಡಿಸಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖಂಡರುಗಳಾದ ಬಸವರಾಜ ಉಳ್ಳಾಗಡ್ಡಿ, ವೀರನಗೌಡ ಬಳೂಟಗಿ, ಶರಣಪ್ಪ ಗಾಂಜಿ, ತಹಶಿಲ್ದಾರ ಬಸವರಾಜ ತೆನ್ನಳ್ಳಿ, ಸಿಪಿಐ ಮೌನೇಶ ಪಾಟೀಲ್,ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ ಪಾಟೀಲ್, ಬಿಸಿಎಂ ಇಲಾಖೆ ಅಧಿಕಾರಿ ಶಿವಶಂಕರ ಕರಡಕಲ್,ತೋಟಗಾರಿಕೆ ಇಲಾಖೆಯ ಅಧಿಕಾರಿ ನಿಂಗನಗೌಡ ಪಾಟೀಲ್, ಕೃಷಿ ಇಲಾಖೆಯ ಅಧಿಕಾರಿ ಪ್ರಾಣೇಶ ಹಾದಿಮನಿ, ಶಿಶು ಅಭಿವೃದ್ದಿ ಅಧಿಕಾರಿ ಬೆಟದಪ್ಪ ಮಾಳೆಕೊಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಿರ್ಭಯ ನ್ಯೂಸ್ ಕನ್ನಡ
"ಇದು ಪ್ರಜಾ ಧ್ವನಿ"
Post a Comment