ರವೀಂದ್ರ ಕಲಾಕ್ಷೇತ್ರದಲ್ಲಿ ಛತ್ರಪತಿ ಶಿವಾಜಿ ಜಯಂತಿ ಉದ್ಘಾಟನೆ
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಉದ್ಘಾಟಿಸಿದರು.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗೋಸಾಯಿ ಮಹಾಸಂಸ್ಥಾನ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ವಹಿಸಿದ್ದರು.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ,ಮರಾಠ ಮಿಲಿಟರಿ ಹೋಟೆಲ್ ಯೋಜನೆ ಫಲಾನುಭವಿಗೆ 5 ಲಕ್ಷ ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಫಲಾನುಭವಿಗೆ 3 ಲಕ್ಷ ಚೆಕ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿತರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಶಾಸಕರಾದ ಶ್ರೀನಿವಾಸ್ ವಿ ಮಾನೆ ಸೇರಿ ಮರಾಠ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.
ನಿರ್ಭಯ ನ್ಯೂಸ್ ಕನ್ನಡ
"ಇದು ಪ್ರಜಾ ಧ್ವನಿ"
Post a Comment