ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಎಸ್.ಎಸ್.ಎಲ್.ಸಿ./ ಪಿ.ಯು.ಸಿ. ಶಿಕ್ಷಣ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವ, ಎಲೆಕ್ಟ್ರಾನಿಕ್ ಮಾಧ್ಯಮದ ಕುರಿತು ಬೆಂಗಳೂರಿನಲ್ಲಿ ವಸತಿ ಸಹಿತ 60 ದಿನಗಳ ಕಾಲ ತರಬೇತಿ ಆಯೋಜಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತಿ ಉಳ್ಳ ಅಭ್ಯರ್ಥಿಗಳು ದಿನಾಂಕ: 20.12.2024ರ ಸಂಜೆ 5.00 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕೇಂದ್ರ ಅಥವಾ ವಲಯ ಕಛೇರಿಗಳಲ್ಲಿ ಸಲ್ಲಿಸಬೇಕು.
ಅಭ್ಯರ್ಥಿಗಳ ಆಯ್ಕೆಯನ್ನು ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯ ಸಮಿತಿಯೂ ಅಂತಿಮಗೊಳಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ತರಬೇತಿಗೆ ಸಂಬಂಧಿಸಿದಂತೆ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, 20ನೇ ಮಹಡಿ, ವಿಶ್ವೇಶ್ವರಯ್ಯ ದೊಡ್ಡ ಗೋಪುರ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001. ದೂ: 080-23198122 ಅಥವಾ ಅಧಿಕಾರಿಗಳ ಮೊಬೈಲ್ ಸಂಖ್ಯೆ: 95998 52887 ಕ್ಕೆ ಸಂಪರ್ಕಿಸಲು ಸೂಚಿಸಲಾಗಿದೆ.
Post a Comment